ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವತಿ ರಕ್ಷಣೆ

ಡೆಸ್ಕ್
1 Min Read

ತುಮಕೂರು: ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಹಂಸ (20) ಅವರನ್ನು ಅಗ್ನಿಶಾಮಕದಳ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ನಗರದ ಎಸ್‌ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿರುವ ಹಂಸ, ಗುಬ್ಬಿ ತಾಲ್ಲೂಕಿನ ಶಿವರಾಂಪುರದ ನಿವಾಸಿ. ಗೆಳತಿಯರ ಜತೆ ಮಂದಾರಗಿರಿ ಬೆಟ್ಟದ ವೀಕ್ಷಣೆಗೆ ಹೋದಾಗ ಮೈದಾಳ ಕೆರೆ ಕೋಡಿ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕೊಚ್ಚಿಕೊಂಡು ಹೋಗಿದ್ದರು.

ಕೋಡಿ ಹರಿಯುವ ಕಡೆ ಸುಮಾರು ಹದಿನೈದು ಅಡಿ ಆಳದಲ್ಲಿರುವ ಕಲ್ಲಿನ ಬಂಡೆಯ ಮಧ್ಯೆ ಸಿಲುಕಿದ್ದ ಯುವತಿಯನ್ನು ಅಗ್ನಿಶಾಮಕ ದಳದ , ಹತ್ತಕ್ಕೂ ಹೆಚ್ಚು ಸಿಬ್ಬಂದಿ ರಕ್ಷಿಸಿದ್ದು, ಯುವತಿಯನ್ನು ವೈದ್ಯಕೀಯ ತಪಾಸಣೆ ಕರೆದೊಯ್ಯಲಾಗಿದೆ.

Share this Article
Verified by MonsterInsights