ಸುರೇಶ್ ಗೌಡ ಕೊಲೆಗೆ ಸುಪಾರಿ ಸಿಎಂ ಪೊಲೀಸರಿಗೆ ನೀಡಿರುವ ಸೂಚನೆ ಏನು..?

ಡೆಸ್ಕ್
1 Min Read
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದ ಶಕ್ತಿಸೌಧ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮಾಜಿ ಶಾಸಕ ಬಿ.ಸುರೇಶ್ ಗೌಡ ಕತ್ತಿ ನೀಡಿ ಗೌರವಿಸಿದರು.
ಶಕ್ತಿ ಸೌಧ ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಮಾತನಾಡಿದರು.

ತುಮಕೂರು: ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರ ಕೊಲೆಗೆ ಸುಪಾರಿ ನೀಡಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ತಿಳಿಸಿದರು.

ಗ್ರಾಮಾಂತರ ಶಕ್ತಿ ಸೌಧ ಉದ್ಘಾಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಸುಪಾರಿ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದು, ಕಾರಣೀಭೂತರಾಗಿರುವ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದು, ಗೆಲ್ಲುವ ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ಪೈಪೋಟಿ ಇರಲಿದೆ, ಕುಣಿಗಲ್ ನಲ್ಲಿ ಫ್ಲೆಕ್ಸ್ ವಿಚಾರದಲ್ಲಿ ನಡೆದಿರುವ ಕಿತ್ತಾಟ ಗಮನದಲ್ಲಿದೆ.
-ಸಿಎಂ ಬಸವರಾಜ ಮೊಮ್ಮಾಯಿ

ತುಮಕೂರು ಗ್ರಾಮಾಂತರದಲ್ಲಿ ಸುರೇಶ್ ಗೌಡ ಅವರ ಜನಸಂಕಲ್ಪ ಯಾತ್ರೆಯಾಗಿ ಮಾಡಿದ್ದಾರೆ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನಸಂಕಲ್ಪಯಾತ್ರೆಗೆ ಭಾರೀ ಜನಬೆಂಬಲ ದೊರೆತಿದ್ದು, ಮುಂದಿನ ದಿನಗಳಲ್ಲಿ ಜನಸಂಕಲ್ಪ ವಿಜಯಸಂಕಲ್ಪ ಆಗುವುದರಲ್ಲಿ ಅನುಮಾನವೇ ಇಲ್ಲ, ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.

 

Share this Article
Verified by MonsterInsights