ತಿಪಟೂರು: ಮೆದುಳು ಜ್ವರದ ವ್ಯಾಕ್ಷಿನ್ ಪಡೆದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು
ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಮೆದುಳು ಜ್ವರದ ಜೆಇ ವ್ಯಾಕ್ಷಿನ್ ಪಡೆದ ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಇಂದು ಮದ್ಯಹ್ನ 2.00ಗಂಟೆ ಸಮಯದಲ್ಲಿ ತಾಲ್ಲೋಕಿನ ಕಸಬಾ ಹೋಬಳಿ ಗುರುಗದಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೆದುಳು ಜ್ವರದ ಜೆಇ ವ್ಯಾಕ್ಸಿನ್ ನೀಡಲಾಗಿದ್ದು ವ್ಯಾಕ್ಸಿನ್ ಪಡೆದ ಸುಮಾರು 8 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ
ತಕ್ಷಣ ಶಾಲೆಯ ಸಿಬ್ಬಂದಿ ವಿದ್ಯಾರ್ಥಿಗಳನ್ನ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗಿದೆ ಅದೇರೀತಿ ತಿಪಟೂರು ನಗರದ ಸರ್ಕಾರಿ ಬಾಲಕೀಯರ ಪ್ರೌಡಶಾಲೆಯ ಇಬ್ಬರು ವಿದ್ಯಾರ್ಥಿಗಳು ವ್ಯಾಕ್ಸಿನ್ ಪಡೆದು ಅಸ್ವಸ್ಥಗೊಂಡಿದ್ದು ತಿಪಟೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ
ಸ್ಥಳಕ್ಕೆ ಮಾಜಿ ಶಾಸಕ ಕೆ.ಷಡಕ್ಷರಿ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಮಕ್ಕಳು ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ದೃಢಿಕರೀಸಿದ ನಂತರ ಪೋಷಕರಲ್ಲಿ ಮೂಡಿದ ಆತಂಕ ದೂರವಾಗಿದೆ