ತುಮಕೂರು: ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಪ್ರಕರಣ ಕ್ಯಾತಸಂದ್ರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೂಳಹರಿವೆ ಸಮೀಪದ ಕಟ್ಟಿಗೆಗೊಲ್ಲಹಳ್ಳಿ ಗ್ರಾಮದ ಮಾರುತಿ ಎಂಬಾತನ ಹೆಂಡತಿಯೊಂದಿಗೆ ಕುಮಾರ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ.
ಹೆಂಡತಿಯ ಅನೈತಿಕ ಸಂಬಂಧದಿಂದ ಕುಪಿತನಾಗಿದ್ದ ಮಾರುತಿ, ಕುಮಾರ್ ಗೆ ಚಾಕುವಿನಿಂದ ಇರಿದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.