ಗುಬ್ಬಿಯಲ್ಲಿ ಕಾಂಗ್ರೆಸ್ ಭಿನ್ನಮತ ಸ್ಫೋಟ.??
ತುಮಕೂರು: ಗುಬ್ಬಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಎಸ್.ಬಸವರಾಜು ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಸಂಸದ ಜಿ.ಎಸ್.ಬಸವರಾಜು ಸಂಬಂಧಿಯಾಗಿರುವ ಪ್ರಸನ್ನ ಕುಮಾರ್, ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟಿಸಲು ಶ್ರಮಿಸಿದ್ದು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಜೆಡಿಎಸ್ ನಿಂದ ಪಕ್ಷಾಂತರಗೊಂಡಿರುವ ಎಸ್.ಆರ್.ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳದಂತೆ ವರಿಷ್ಠರ ಮೇಲೆ ಒತ್ತಡ ಹೇರಿದ್ದ ಪ್ರಸನ್ನಕುಮಾರ್ ಅವರು, ಮೂಲ ಕಾಂಗ್ರೆಸ್ಸಿಗರಿಗೆ ಟಿಕೆಟ್ ನೀಡುವಂತೆ ವರಿಷ್ಠರ ಮುಂದೆ ಅಭಿಪ್ರಾಯವನ್ನು ಮಂಡಿಸಿದ್ದರು.
ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಖಚಿತವಾದ ಮೇಲೆಯೂ ಶಾಸಕ ಶ್ರೀನಿವಾಸ್ ಮೇಲೆ ಗುಬ್ಬಿ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದರು, ನಿನ್ನೆಯಿಂದ ಎಸ್.ಆರ್.ಶ್ರೀನಿವಾಸ್ ಮನೆ ಮನೆ ಪ್ರಚಾರ ಆರಂಭಿಸಿದ ಬೆನ್ನಲ್ಲೇ, ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಮುಂದಾಗಿದ್ದ ಪ್ರಸನ್ನ ಕುಮಾರ್ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಅಮಾನತು ಮಾಡಿದ್ದು, ಆದೇಶ ಹೊರಬೀಳಬೇಕಾಗಿದೆ ಎನ್ನಲಾಗಿದೆ.
ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಕುಮಾರ್, ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ವಿರೋಧಿಸಿದ್ದರು. ತಾನೇ ಅಭ್ಯರ್ಥಿ ಎಂದು ಪ್ರಚಾರಕ್ಕೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಶಾಸಕ ಶ್ರೀನಿವಾಸ್ ಅವರನ್ನು ಗೆಲ್ಲಿಸಲು ಒಗ್ಗೂಡಿ ಕೆಲಸ ಮಾಡುವಂತೆ ಪಕ್ಷದ ಮುಖಂಡರಿಗೆ ವರಿಷ್ಠರು ಸೂಚನೆ ನೀಡಿದ್ದು, ಭಿನ್ನಮತವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಸನ್ನಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಪಕ್ಷದ ಮೂಳಗಳು ತಿಳಿಸಿವೆ.