ಜೆಡಿಎಸ್ ನಲ್ಲಿ ಭುಗಿಲೆದ್ದ ಭಿನ್ನಮತ, ನಾಮಪತ್ರ ಸಲ್ಲಿಸಿದ ನರಸೇಗೌಡ

ಡೆಸ್ಕ್
1 Min Read

ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಕಟ್ಟಾಳು

ತುಮಕೂರು: ನಗರ ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೆದಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಜೆಡಿಎಸ್ ಕಟ್ಟಾಳು, ಮುಖಂಡ ನರಸೇಗೌಡ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಜೆಡಿಎಸ್ ಟಿಕೆಟ್ ಘೋಷಣೆಯ ಬೆನ್ನಲ್ಲೆ ಶುರವಾದ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ನರಸೇಗೌಡ ಅವರ ಮನೆಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಹಿರಿಯ ಮುಖಂಡರನ್ನು ಜೊತೆಯಲ್ಲಿ ಕೊಂಡೊಯ್ಯುವಂತೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ ಸಲಹೆ ನೀಡಿದ್ದರು.

ಜೆಡಿಎಸ್ ವರಿಷ್ಠ ಮಾಜಿ ಸಿಎಂ ಕುಮಾರಸ್ವಾಮಿ ಅವರ ಸೂಚನೆಯನ್ನು ಪಾಲಿಸದ ಗೋವಿಂದರಾಜು ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಮುಖಂಡ ನರಸೇಗೌಡ ಅವರು, ನಾಮಪತ್ರ ಸಲ್ಲಿಸುವ ಮೂಲಕ ಸೆಡ್ಡು ಹೊಡೆದಿದ್ದಾರೆ. ಚುನಾವಣೆಯಲ್ಲಿ ಜೆಡಿಎಸ್ ಒಗ್ಗೂಡಿಸುವುದು ಅವಶ್ಯಕವಾಗಿದ್ದರು ಸಹ ನಮ್ಮನ್ನು ನಿರ್ಲಕ್ಷ್ಯವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಲಹೆಯನ್ನು ಪಾಲಿಸದೇ ಹಿರಿಯ ಜೆಡಿಎಸ್ ಮುಖಂಡರನ್ನು ನಿರ್ಲಕ್ಷಿಸಿರುವುದರ ವಿರುದ್ಧ ಜೆಡಿಎಸ್ ನ ಹಿರಿಯ ಮುಖಂಡರ ಪರವಾಗಿ ನರಸೇಗೌಡ ನಾಮಪತ್ರ ಸಲ್ಲಿಸಿದ್ದು, ಅನೇಕ ಹಿರಿಯ ಮುಖಂಡರ ಬೆಂಬಲದೊಂದಿಗೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

 

Share this Article
Verified by MonsterInsights