ತುಮಕೂರು; ನಗರದ ಸಿದ್ದಗಂಗಾ ಮಠಕ್ಕೆ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ. ಸುರೇಶ್‌ಗೌಡ ಅವರು ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಶ್ರೀಮಠ ಮಠ ಪವಿತ್ರವಾದ ಕ್ಷೇತ್ರ. ನಾನು ಮೊದಲಿನಿಂದಲೂ ಯಾವುದೇ ಶುಭ ಕಾರ್ಯವನ್ನು ಕೈಗೊಳ್ಳಬೇಕಾದರೆ ಶ್ರೀಮಠಕ್ಕೆ ಬಂದು ಸ್ವಾಮೀಜಿಯವರ ಆಶೀರ್ವಾದ ಪಡೆಯುವುದು ರೂಢಿ. ಹಾಗೆಯೇ ಇಂದು ಸಹ ಶ್ರೀಕ್ಷೇತ್ರಕ್ಕೆ ಬಂದು ಹಿರಿಯ ಶ್ರೀಗಳ ಗದ್ದುಗೆ ದರ್ಶನ ಮಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದೇನೆ ಎಂದರು.
ನಾನು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಮುಖವಾದ ಕಾರ್ಯಗಳನ್ನು ಮಾಡಬೇಕಾದರೆ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಿದ್ದೆ. ಚುನಾವಣೆಯಲ್ಲಿ ಸ್ಪರ್ಧೆ ಮಾಡುವಾಗಲೂ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದೆ. ಅದೇ ರೀತಿ ಈಗಲೂ ಸಹ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದೇನೆ. ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದವೂ ನನಗೆ ಸಿಕ್ಕಿದೆ. ಇನ್ನು ಮುಂದೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತನಾಗುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮೈದಾಳ ಗ್ರಾ.ಪಂ. ಅಧ್ಯಕ್ಷೆ ಮಾಲಾ ಮಂಜುನಾಥ್, ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಡಿ.ಎನ್. ಶಂಕರ್, ಮೈದಾಳ ಗ್ರಾಮ ಪಂಚಾಯ್ತಿ ಸದಸ್ಯ ಲಕ್ಷ್ಮಿನಾರಾಯಣ್ ಶಿವಕುಮಾರ್, ರಾಜಶೇಖರ್, ವೈ.ಹೆಚ್. ಹುಚ್ಚಯ್ಯ, ವೈ.ಟಿ. ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.