ತುಮಕೂರು: ಅಶ್ಲೀಲ ಮತ್ತು ಮಾರ್ಪಾಟು ಮಾಡಿರುವ ವಿಡಿಯೋಗೆ ಸಂಬಂಧಿಸಿದಂತೆ ಯಾವುದೇ ವರದಿಯನ್ನು ಪ್ರಕಟಿಸದಂತೆ ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ತುಮಕೂರು ಜಿಲ್ಲಾ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿದ್ದಾರೆ.
ಮಾನಹಾನಿ ಮಾಡುವ ಉದ್ದೇಶದಿಂದ ಮಾರ್ಪಡಿಸಿರುವ ವಿಡಿಯೋ ಮತ್ತು ಪೋಟೋವನ್ನು ಪ್ರಕಟಿಸುವ ಸಾಧ್ಯತೆ ಇದ್ದು, ಇದರಿಂದ ನನಗೆ ಮಾನಹಾನಿ ಆಗುವ ಸಾಧ್ಯತೆ ಹೆಚ್ಚಿರುವುದರಿಂದ ಮಾನಹಾನಿ ಆಗುವಂತಹ ವರದಿಯನ್ನು ಪ್ರಕಟಿಸದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮಾನಹಾನಿ ವರದಿ ಪ್ರಕಟಿಸದಂತೆ 17 ಪತ್ರಿಕೆ /ಸುದ್ದಿಸಂಸ್ಥೆಗಳ ಸಂಪಾದಕರಿಗೆ ಸಮನ್ಸ್ ಜಾರಿಗೊಳಿಸಿ, ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿ ಪ್ರಕರಣವನ್ನು ಜೂ.06ಕ್ಕೆ ಮುಂದೂಡಿ ಆದೇಶವನ್ನು ಹೊರಡಿಸಿದೆ.