ತುಮಕೂರು: ಅಭಿಮಾನಿಗಳು ಸಂಭ್ರಮಾಚರಣೆಗೆ ಸಿಡಿಸಿದ ಪಟಾಕಿ ಸಚಿವ ಕೆ.ಎನ್.ರಾಜಣ್ಣ ಕಣ್ಣಿನ ಕೆಳಗೆ ತಾಕಿರುವ ಘಟನೆ ಕುಣಿಗಲ್ ನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಹಾಸನದಲ್ಲಿ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ ನೀಡಲು ಹೊರಟಿದ್ದ ಅವರನ್ನು ಕುಣಿಗಲ್ ನಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಅಭಿಮಾನಿಗಳೊಂದಿಗೆ ನಿಂತು ಮಾತನಾಡುತ್ತಿರಬೇಕಾದರೆ ಸಂಭ್ರಮದಲ್ಲಿ ಪಟಾಕಿ ಸಿಡಿಸಿದ್ದು, ಸಚಿವ ಕೆ.ಎನ್.ರಾಜಣ್ಣ ಅವರ ಎಡಗಣ್ಣಿನ ಕೆಳಭಾಗಕ್ಕೆ ತಾಗಿದ್ದರಿಂದ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ತಕ್ಷಣ ಸಚಿವರನ್ನು ಕುಣಿಗಲ್ ನ ಎಂ.ಎಂ.ಎಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದ್ದು, ವೈದ್ಯರು ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿಸಿದ್ದು, ಚಿಕಿತ್ಸೆ ಪಡೆದ ನಂತರ ಹಾಸನಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.