10ನೇ ತರಗತಿವರೆಗೂ ಮಕ್ಕಳಿಗೆ ಮೊಟ್ಟೆ/ ಬಾಳೆಹಣ್ಣು ವಿತರಣೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಅನ್ನು ಮಂಡನೆ ಮಾಡಿದರು. ಇದೇ ವೇಳೆ ಅವರು ತಮ್ಮ ಬಜೆಟ್‌ ಮಂಡನೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು.

ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ.ಗಳ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು ಅಂಥ ತಿಳಿಸಿದರು. ಈ ಹಿಂದೆ ಮಕ್ಕಳಿಗೆ ಮೊಟ್ಟೆ ಕೊಡುವುದಕ್ಕೆ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದರು, ಆದರೆ ಈಗ ಮಕ್ಕಳ ಆರೋಗ್ಯಕ್ಕಾಗಿ ಸಿಎಂ ಮುಂದಾಗಿದ್ದು, ಮಕ್ಕಳಿಗೆ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ನೀಡಲಾಗುವುದು ಅಂತ ತಿಳಿಸಿದ್ದಾರೆ.

 

Verified by MonsterInsights