ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವಿದ್ಯಾಸಿರಿ ಮತ್ತೆ ಆರಂಭ

 

ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿವಿಧ ಯೋಜನೆಗಳನ್ನು ಮರು ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದು, ಈ ಬಾರಿ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಅವಶ್ಯಕ ಅನುದಾನ ನೀಡದೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದೇ ನಿರ್ಲಕ್ಷಿಸಿರುವುದು ವಿಷಾದನೀಯ ಬೆಳವಣಿಗೆ ಎಂದು ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿಯೇ ಕಿಡಿಕಾರಿದರು.

ವೈದ್ಯಕೀಯ, ಇಂಜಿನಿಯರಿಂಗ್‌ ಮತ್ತು ಇತರೆ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಅರಿವು ಎಂಬ ಯೋಜನೆಯ ಮುಖಾಂತರ ವಾರ್ಷಿಕ ಒಂದು ಲಕ್ಷ ರೂ.ಗಳ ಸಾಲ ಶೇ.2ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತಿತ್ತು.

11,956 ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು.ಆದರೆ, ಈ ಕಾರ್ಯಕ್ರಮವನ್ನು ಹಿಂದಿನ ಸರ್ಕಾರವು 2020-21ನೇ ಸಾಲಿನಿಂದ ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರವು ಪುನರ್‌ ಚಾಲನೆ ನೀಡಲಿದೆ ಎಂದು ತಿಳಿಸಿದರು.

Verified by MonsterInsights