ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಹಲವು ಜನಪ್ರಿಯ ಯೋಜನೆಗಳನ್ನು ತಿಳಿಸಿದ್ದಾರೆ. ಇದೇ ವೇಳೆ ಅವರು ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಸಹಾಯಕರಿಗೆ ಮತ್ತು ಬಿಸಿಯೂಟ ತಯಾರಕರಿಗೆ ಹಾಗೂ ಸಹಾಯಕರಿಗೆ ತಲಾ 1000 ರೂ. ಗೌರವಧನ ಹೆಚ್ಚಳ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾನುಭವ ಆಧಾರದಲ್ಲಿ 1000 ರೂ. – 1500 ರೂ.ಗಳಷ್ಟು ಗೌರವಧನ ಹೆಚ್ಚಳ ಮಾಡಲಾಗುವುದು ಅಂತ ತಿಳಿಸಿದ್ದಾರೆ.
ಇದೇ ವೇಳೆ ಅವರು ಪೌರಕಾರ್ಮಿಕರಿಗೆ ಮಾಸಿಕ 2,000 ರೂ. ಸಂಕಷ್ಟ ಭತ್ಯೆ. ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ರೂ. ಪ್ರೋತ್ಸಾಹಕ ನೀಡಲಾಗುವುದು ಅಂತ ತಿಳಿಸಿದ್ದಾರೆ. ಇನ್ನೂ ಜಲಜೀವನ್ ಮಿಷನ್ ಯೋಜನೆಯಡಿ ಮುಂದಿನ ಎರಡು ವರ್ಷಗಳಲ್ಲಿ ತಲಾ 25 ಲಕ್ಷ ಮನೆಗಳಿಗೆ ನಳ ಸಂಪರ್ಕ ಒದಗಿಸುವ ಹಾಗೂ 2022-23ನೇ ಸಾಲಿನಲ್ಲಿ 7,000 ಕೋಟಿ ರೂ.ಗಳನ್ನು ವೆಚ್ಚ ಭರಿಸುವ ಗುರಿ ಹೊಂದಲಾಗಿದೆ ಅಂತ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರು, ಮೀನುಗಾರರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಆದ್ಯತೆ ಅಂತ ಅವರು ಇದೇ ವೇಳೆ ತಿಳಿಸಿದ್ದಾರೆ.