ತುಮಕೂರು: ನಗರದ ಎಂಪ್ರೆಸ್ ಶಾಲೆ ಸಭಾಂಗಣದಲ್ಲಿ ನಡೆದ ಗೃಹ ಜ್ಯೋತಿ ಯೋಜನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾರ್ಪೋರೇಟರ್ ಪತಿಯರು ವೇದಿಕೆಯಲ್ಲಿ ಆಸೀನರಾಗಿದ್ದರು.
ಮಾಜಿ ಶಾಸಕ ಡಾ.ರಫೀಕ್ ಅಹಮದ್, ಫರ್ಹಾನ ಬೇಗಂ, ಸುವರ್ಣಾದೇವಿ, ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಇಸ್ಮಾಯಿಲ್ ( ಕಾರ್ಫೋರೇಟರ್ ಪತಿ) ಸೇರಿದಂತೆ ಇತರರು ವೇದಿಕೆಯಲ್ಲಿ ಅವಕಾಶ ಕಲ್ಪಿಸುವ ಮೂಲಕ ಬೆಸ್ಕಾಂ ಅಧಿಕಾರಿಗಳು ಕಾರ್ಯಕ್ರಮದ ಸಂಹಿತೆಯನ್ನು ಉಲ್ಲಂಘಿಸಿದರು.