ತುಮಕೂರು: ಕಳೆದ ಒಂದು ವಾರದ ಅವಧಿಯಲ್ಲಿ ಎರಡು ಚಿರತೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದಿರುವ ಘಟನೆ ತುಮಕೂರು ತಾಲ್ಲೂಕಿನ ಚಿನಿವಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ವಾರದ ಹಿಂದೆ ಗಂಡು ಚಿರತೆ ಸೆರೆಯಾಗಿದ್ದು, ಇನ್ನೂ ಎರಡು ಚಿರತೆ ಮರಿಗಳಿರುವ ಸಾಧ್ಯತೆ ಇದೆ ಎನ್ನಲಾಗಿದೆ. ರೈತರಿಗೆ ತೊಂದರೆ ಕೊಡುತ್ತಿದ್ದ ಚಿರತೆಗಳ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಎರಡು ಚಿರತೆಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಸೆರೆ ಹಿಡಿದ ಚಿರತೆಯನ್ನು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಅರಣ್ಯ ಇಲಾಖೆ ರವಾನಿಸಿದೆ.