ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಗೂಡ್ ಶೆಡ್ ಕಾಲೋನಿಯಲ್ಲಿ ವಾಸವಾಗಿರುವ ಆಟೋ ಚಾಲಕ ಸೈಯದ್, ಅದೇ ಕಾಲೋನಿಯಲ್ಲಿ ಸಂಬಂಧಿಕರೊಂದಿಗೆ ವಾಸವಾಗಿದ್ದ ಏಳು ವರ್ಷದ ಬಾಲಕಿಯನ್ನು ಆಟೋದಲ್ಲಿ ಕರೆದೊಯ್ದು ಕ್ಯಾತ್ಸಂದ್ರ ಬಳಿಯ ನಿರ್ಜನ ಪ್ರದೇಶದಲ್ಲಿದ್ದ ಸಾರ್ವಜನಿಕರು ಹಿಡಿದು ಪ್ರಶ್ನಿಸಿದ್ದಾರೆ.
ಈ ವೇಳೆ ತಪ್ಪಾಯ್ತು ಬಿಟ್ಬಿಡಿ ಎಂದು ಗೊಗರೆದಿರುವ ಸೈಯದ್ ನನ್ನು ಸಾರ್ವಜನಿಕರು ಮಹಿಳಾ ಠಾಣೆಗೆ ಒಪ್ಪಿಸಿದ್ದು, ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.