ತುಮಕೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಮಾರುತಿ ಅಲಿಯಾಸ್ ಪೋಲಾರ್ಡ್ ನನ್ನು ತಡರಾತ್ರಿ ಬಂಡಿಮನೆ ಕಲ್ಯಾಣ ಮಂಟಪದ ಬಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಿಲಕ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಹಟ್ಟಿಮಂಜನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಪೊಲಾರ್ಡ್, ನಟೋರಿಯಸ್ ರೌಡಿಶೀಟರ್ ರೋಹಿತನ ಸಹಚರನಾಗಿ ಗುರುತಿಸಿಕೊಂಡಿದ್ದನು.
ಹಣಕಾಸು ವ್ಯವಹಾರ ಹಾಗೂ ಹಳೇ ದ್ವೇಷದ ಹಿನ್ನೆಲೆಯಲ್ಲಿ ಜಯಪುರದ ಶಿವಪ್ರಸಾದ್, ಸಲೀಂ ಹಾಗೂ ಇತರ ಮೂವರು ತಡರಾತ್ರಿ ಮಾರುತಿ ಅಲಿಯಾಸ್ ಪೋಲಾರ್ಡ್ ನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣದಲ್ಲಿದ್ದ ಮೂವರು ಆರೋಪಿಗಳನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬಿಸಿದ್ದಾರೆ, ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್, ಎಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ