ಬೆಳ್ಳಂಬೆಳಿಗ್ಗೆ ತುಮಕೂರಿನಲ್ಲಿ ಲೋಕಾಯುಕ್ತ ದಾಳಿ

ಡೆಸ್ಕ್
0 Min Read

ತುಮಕೂರು: ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಿರಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸಹಾಯಕ ಎಂಜಿನಿಯರ್ ನಾಗೇಂದ್ರಪ್ಪ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ತುಮಕೂರು ನಗರದ ಮಿರ್ಜಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆ ಮತ್ತು ಶಿರಾ ಪಟ್ಟಣದಲ್ಲಿರುವ ಕಚೇರಿ ಹಾಗೂ ಫಾರಂಹೌಸ್ ನಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್ ಪಿಗಳಾದ ಮಂಜುನಾಥ್, ಹರೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಮಾಹಿತಿ ದೊರಕಲಿದೆ.

 

Share this Article
Verified by MonsterInsights