ತುಮಕೂರು: ಹದಿನೈದು ವರ್ಷಗಳಿಂದ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕನಾಗಿರುವ ಹೇರಂಬ ಅವರನ್ನು ವರ್ಗಾವಣೆಗೊಳಿಸುವಂತೆ ಒತ್ತಾಯಿಸಿ ರಾಜ್ಯ ಮಾಹಿತಿಹಕ್ಕು ಮತ್ತು ಸಾಮಾಜಿಕ ಹೋರಾಟಗಾರರ ಸಮಿತಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯಾಧ್ಯಕ್ಷ ರಮೇಶ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಂ.ಬಿ.ದ್ಯಾಬೇರಿ ಅವರ ಕಾಲದಿಂದಲೂ ಆಪ್ತ ಸಹಾಯಕನಾಗಿ ಒಂದೇ ಜಾಗದಲ್ಲಿ ಠಿಕಾಣಿ ಹೂಡಿರುವ ಹೇರಂಬ ಹಾಗೂ ಇತರೆ ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತಿರುವುದಾಗಿ ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯಾಧ್ಯಕ್ಷ ಹೆಚ್ ಜಿ ರಮೇಶ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಾಗಿ ವಿಡಿಯೋ ಮೂಲಕ ಮಾಹಿತಿ ಬಹಿರಂಗ ಪಡಿಸಿ ಸರ್ಕಾರಗಳು ಉನ್ನತ ಅಧಿಕಾರಿಗಳು ಬದಲಾವಣೆ ಆದಾಗ ಸಿಬ್ಬಂದಿಗಳ ಬದಲಾವಣೆ ಅನಿವಾರ್ಯ ಕಾರಣ ಉತ್ತಮ ಹಾಗೂ ಪಾರದರ್ಶನದ ಆಡಳಿತ ನೀಡಲು ಕೆಲವೊಂದು ಬದಲಾವಣೆಗಳು ಆದಾಗ ಉತ್ತಮ ಆಡಳಿತ ನೀಡಲು ಸಹಕಾರಿ , ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಆಪ್ತ ಶಾಖೆ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಠಿಕಾಣಿ ಹೂಡಿರುವ ಅಧಿಕಾರಿ ವರ್ಗ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾಢಳಿತದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಇದಕ್ಕೆ ತದ್ವಿರುದ್ಧವಾಗಿ ಆಡಳಿತ ನಡೆಯುತ್ತಿವೆ ಕಾರಣ ತುಮಕೂರು ಜಿಲ್ಲಾಡಳಿತದಲ್ಲಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕನಾಗಿ ಕಳೆದ ಹದಿನೈದು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕೂಡಿ ಕೆಲಸ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹೇರಂಬ ಅಧಿಕಾರಿಗಳನ್ನು ಹಿಡಿತದಲ್ಲಿ ಇಟ್ಟುಕೊಂಡು ಅಧಿಕಾರಿಗಳ ಪಾರದರ್ಶಕ ಕೆಲಸಗಳಿಗೆ ಅಡ್ಡಲಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ಆಪ್ತ ಶಾಖೆ ಹಾಗೂ ಜಿಲ್ಲಾಢಳಿತದಲ್ಲಿ ಠಿಕಾಣಿ ಹೂಡಿರುವ ಅಧಿಕಾರಿಗಳನ್ನು ಎತ್ತಂಗಡಿ ಮಾಡದಿದ್ದರೆ ಸಂಕ್ರಾಂತಿ ನಂತರ ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.