ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪರಿಶಿಷ್ಟ ಜಾತಿಯಲ್ಲಿ ಹಿಂದುಳಿದಿರುವ ಜಾತಿಗಳ ಅಭಿವೃದ್ಧಿಗೆ ಒಳಮೀಸಲಾತಿ (internal reservation )ಯನ್ನು ಕಲ್ಪಿಸುವ ಅವಶ್ಯಕತೆ ಇದೆ ಎಂದು ಸುಪ್ರೀಂಕೋರ್ಟ್  ಅಭಿಪ್ರಾಯಪಟ್ಟಿದ್ದು. ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಏಳು ನ್ಯಾಯಾಧೀಶರ ಪೀಠದಲ್ಲಿ 6 -1ರಲ್ಲಿ ಒಳಮೀಸಲಾತಿಗೆ ಒಪ್ಪಿಗೆ ಸೂಚಿಸಿದೆ. ಒಳ ಮೀಸಲಾತಿಯನ್ನು ಕಲ್ಪಿಸುವಾಗ ಮೀಸಲಾತಿಯನ್ನು ಉಪವರ್ಗಕ್ಕೆ 100 % ಮೀಸಲಿಡಲು ಸಾಧ್ಯವಿಲ್ಲ, ಉಪವರ್ಗದ ಪ್ರಾತಿನಿಧ್ಯ ಹಾಗೂ ದತ್ತಾಂಶದ ಆಧಾರದ ಮೇಲೆ ಒಳಮೀಸಲಾತಿಯನ್ನು ನೀಡುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನವನ್ನು ನೀಡಿದೆ.

2004ರಲ್ಲಿ  ಇವಿ ಚಿನ್ನಯ್ಯ ಪ್ರಕರಣದಲ್ಲಿ ಪರಿಶಿಷ್ಟ ಜಾತಿಯಲ್ಲಿ ಏಕರೂಪದ ಗುಂಪು, ಸಂವಿಧಾನದ ಅನುಚ್ಛೇದ 341ರ ಅಡಿ ಅವುಗಳನ್ನು ವರ್ಗಿಕರಿಸಲು ಸಾಧ್ಯವಿಲ್ಲ ಎಂದು ಇವಿ ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ಸರ್ಕಾರದ ವಿರುದ್ಧ ಪ್ರಕರಣದಲ್ಲಿ ಈ ಹಿಂದೆ ನೀಡಿದ್ದ ತೀರ್ಪುನ್ನು 7 ನ್ಯಾಯಾಧೀಶರ ಸಂವಿಧಾನ ಪೀಠ ತಳ್ಳಿಹಾಕಿರುವ ಹಾಕಿದೆ.

ಪರಿಶಿಷ್ಟ ಜಾತಿಗಳು ಏಕರೂಪದ ವರ್ಗಗಳಲ್ಲ ಎನ್ನುವುದಕ್ಕೆ ಐತಿಹಾಸಿಕ ಪುರಾವೆಗಳನ್ನು ತೀರ್ಪಿನಲ್ಲಿ (sc-st supreme court verdict) ನ್ಯಾಯಮೂರ್ತಿ ಮಿಶ್ರಾ ಅವರು ಉಲ್ಲೇಖಿಸಿದ್ದು, ಒಳ ಮೀಸಲಾತಿ ಸಂವಿಧಾನದ 14ನೇ ವಿಧಿಯ ಸಮಾನತೆಯ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.

ಒಳ ಮೀಸಲಾತಿ ಸಂವಿಧಾನದ 341(2) ವಿಧಿಯ ಉಲ್ಲಂಘನೆಯಾಗುವುದಿಲ್ಲ ಹಾಗೂ 15 ಮತ್ತು 16ನೇ ವಿಧಿಗಳಲ್ಲಿ ಒಳ ಮೀಸಲಾತಿಗೆ ವಿರೋಧವಾಗಿರುವ ಯಾವುದೇ ಅಂಶಗಳಿಲ್ಲ, ಒಳಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೇ ರಾಜಕೀಯ ಉದ್ದೇಶದಿಂದ ಕಾರ್ಯನಿರ್ವಹಿಸಲು ರಾಜ್ಯಗಳಿಗೆ ಅವಕಾಶವಿಲ್ಲ, ರಾಜ್ಯಗಳು ತೆಗೆದುಕೊಳ್ಳುವ ತೀರ್ಮಾನಗಳು ನ್ಯಾಯಾಂಗ ಪರಿಶೀಲನೆಗೆ ಅರ್ಹವಾಗಿದೆ ಎಂದು ತೀರ್ಪು ನೀಡಿದ್ದಾರೆ.

ಫೆ.8ರಂದು ಒಳಮೀಸಲಾತಿ ಸಂಬಂಧ ಮೂರು ದಿನಗಳ ವಿಚಾರಣೆ ನಡೆಸಿದ ನಂತರ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಬಿ.ಆರ್.ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳೊಂಡ ಸಂವಿಧಾನ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.

ತುಮಕೂರಿನ ದಲಿತ ಹೋರಾಟಗಾರ ದಿ.ಪಾರ್ಥಸಾರಥಿ ಅವರು ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ನಲ್ಲಿ ದಾವೆಯನ್ನು ಹೂಡಿದ್ದರು.

 

 

Verified by MonsterInsights