ಪಾವಗಡ : ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನಿಡಗಲ್ ಹೋಬಳಿಯ ಕರೆಕ್ಯಾತನಹಳ್ಳಿ ಯ ಸ್ವಾರಮ್ಮ ದೇವಸ್ಥಾನದ ಬಳಿ ಶನಿವಾರ ಮಧ್ಯಾಹ್ನ 1.30ರ ಸಮಯದಲ್ಲಿ ನಡೆದಿದೆ
ತಾಲ್ಲೂಕಿನ ಅರಸೀಕೆರೆ ಗ್ರಾಮದ ಕುಮಾರ್ (28) ಮೃತರು, ಕುಮಾರ್ ಜೆಸಿಬಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.
ಶ್ರಾವಣ ಶನಿವಾರದ ಹಿನ್ನಲೆ ಪಾವಗಡ ಪಟ್ಟಣದ ಶನಿಮಹಾತ್ಮ ಸ್ವಾಮಿ ದರ್ಶನಕ್ಕೆ ಬಂದು ವಾಪಸ್ ತನ್ನ ಸ್ವಗ್ರಾಮಕ್ಕೆ ಹಿಂತಿರುಗುವಾಗ ತನ್ನ ದ್ವಿಚಕ್ರ ವಾಹನದ ಚಕ್ರ ಪಂಕ್ಚರ್ ಆದ ಹಿನ್ನಲೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದು ಅದೇ ವೇಳೆಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಕುಮಾರ್ ತಲೆ ಮೇಲೆ ಹರಿದು ತಲೆ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ ಎಂದು ತಿಳಿದುಬಂದಿದೆ
ವಿಷಯ ತಿಳಿದ ನಂತರ ಅರಸೀಕೆರೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಾರಾಸಿಂಗ್ ಮತ್ತು ಸಿಬ್ಬಂಧಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತ ದೇಹವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳುಹಿಸುವ ಕೆಲಸ ಮಾಡಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.