ಸಿದ್ಧಗಂಗಾ ಮಠದ ಮಾದರಿಯಲ್ಲಿ ತುಮಕೂರಿನ ರೈಲ್ವೆ ನಿಲ್ದಾಣ ನಿರ್ಮಾಣ: ವಿ.ಸೋಮಣ್ಣ

ಡೆಸ್ಕ್
1 Min Read

ತುಮಕೂರು: ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿರುವ ಸಿದ್ಧಗಂಗಾ ಮಠದ ಮಾದರಿಯಲ್ಲಿಯೇ ತುಮಕೂರು ರೈಲ್ವೆ ನಿಲ್ದಾಣವನ್ನು ನಿರ್ಮಿಸಲು ರೈಲ್ವೆ ಇಲಾಖೆ ಮುಂದಾಗಿದೆ.

ಮಠದ ಭಕ್ತರಾಗಿರುವ ಸಂಸದ ವಿ.ಸೋಮಣ್ಣ ಅವರು ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ರೈಲ್ವೆ ಸಂಬಂಧಿಸಿದಂತೆ ಕಾಮಗಾರಿಗಳು ವೇಗ ಪಡೆದುಕೊಂಡಿದ್ದು, ಅನುದಾನ ಮಂಜೂರಾತಿ ದೊರಕುತ್ತಿದೆ, ತುಮಕೂರು ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರ್ವಜನಿಕರು, ಪ್ರಯಾಣಿಕರ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಅಗತ್ಯ ಅನುದಾನವನ್ನು ಒದಗಿಸಲಾಗಿದೆ.

ತುಮಕೂರು ನಿಲ್ದಾಣವನ್ನು ಪ್ರಯಾಣಿಕರ ಸ್ನೇಹಿ ಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ನವೀಕರಣಗೊಂಡ ನಿಲ್ದಾಣವು ಬಹು ಹಂತದ ಪಾರ್ಕಿಂಗ್ ವ್ಯವಸ್ಥೆ, ಆಧುನಿಕ ಪ್ರಯಾಣಿಕರ ಲಾಂಜ್‌ಗಳು, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಒಳಗೊಂಡಿರಲಿದೆ. ಅಲ್ಲದೇ, ಬೆಳೆಯುತ್ತಿರುವ ತುಮಕೂರಿನ ಭವಿಷ್ಯದ ಅಗತ್ಯಗಳನ್ನು ಪೂರೈಸಲು ಹೆಚ್ಚಿನ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಮಿಸಲಾಗುತ್ತದೆ. ತುಮಕೂರಿನ ಪುಣ್ಯಕ್ಷೇತ್ರ ಸಿದ್ಧಗಂಗಾ ಮಠದ ಮಾದರಿಯಲ್ಲಿ ಮೇಲ್ದರ್ಜೆಗೇರಲಿರುವ ಪ್ರಸ್ತಾವಿತ ಕಟ್ಟಡದ ಮುನ್ನೋಟ ಹೀಗಿದೆ ಎಂದು ರೈಲ್ವೆ ಸಚಿವ ವಿ.ಸೋಮಣ್ಣ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

Share this Article
Verified by MonsterInsights