49 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಡೆಸ್ಕ್
1 Min Read

ತುಮಕೂರು: 15ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಕಳವಾಗಿದ್ದ 49 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ತುಮಕೂರು ಪೊಲೀಸರು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದಾರೆ.

ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 03/03/2024ರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದ ಬೆನ್ನೆತ್ತಿದ ಪೊಲೀಸರು ಆರೋಪಿಗಳಾದ ಆಂಧ್ರ ಪ್ರದೇಶದ ಗುಂಟೂರು ಮೂಲದ ಬಂಡಿಕಾಳ್ಳ ರತ್ನರಾಜು, ಮಧುಗಿರಿ ತಾಲ್ಲೂಕು ಹೊಸ ಇಟಕಲೋಟಿಯ ಹೆಚ್.ವಿ.ಶ್ರೀನಿವಾಸ್ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದಾಗ 15ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.


ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ 10 ಪ್ರಕರಣ, ಹೊಸ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ 01, ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ 02 ಪ್ರಕರಣ, ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಒಂದು ಪ್ರಕರಣದಲ್ಲಿ ಕಳವಾಗಿದ್ದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.

 

 

 

Share this Article
Verified by MonsterInsights