ಹೊನ್ನಮ್ಮ ಕೊಲೆ ಪ್ರಕರಣ: ಐತಿಹಾಸಿಕ ತೀರ್ಪು
ತುಮಕೂರು: ಪರಿಶಿಷ್ಟ ಜಾತಿ ಮಹಿಳೆಯನ್ನು ಬರ್ಬರ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.
2010ರಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿಯ ಗೋಪಾಲಪುರ ಗ್ರಾಮದ ಡಾಬಾ ಹೊನ್ನಮ್ಮ ಅವರನ್ನು ಕಲ್ಲಿನಿಂದ ಹೊಡೆದು ಸಾಯಿಸಿದ್ದ ಪ್ರಕರಣದಲ್ಲಿ 27 ಆರೋಪಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದು, ಅದರಲ್ಲಿ 6 ಆರೋಪಿಗಳು ಸಾವನ್ನಪ್ಪಿದ್ದಾರೆ.
ಉಳಿದ 21ಆರೋಪಿಗಳ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 3ನೇ ಅಧಿಕ ಸತ್ರ ನ್ಯಾಯಾಲಯ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 13,500 ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರಾದ ಶ್ರೀ ಎ.ನಾಗಿರೆಡ್ಡಿ ತೀರ್ಪು ನೀಡಿ ಆದೇಶಿಸಿದ್ದಾರೆ.