ತುಮಕೂರು: ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿರುವ ಬಗ್ಗೆ ಕೇಳಿಬಂದ ಸಾರ್ವಜನಿಕ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ, ತಪಾಸಣೆ ನಡೆಸಿತು.
ತುಮಕೂರು ಲೋಕಾಯುಕ್ತ ಪೊಲೀಸರ ತಂಡ ಆರ್ ಟಿಒ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿಯಲ್ಲಿದ್ದವರಿಂದ ಮಾಹಿತಿ ಸಂಗ್ರಹಿಸುವುದರೊಂದಿಗೆ ಅಧಿಕಾರಿಗಳ ಮೇಲೆ ಸಾರ್ವಜನಿಕರು ದೂರು ಹೇಳಿದರೆ ಎಫ್ ಐಆರ್ ದಾಖಲಿಸಲು ಮುಂದಾಗಿದೆ ಎಂಬ ಮಾಹಿತಿ ದೊರೆತಿದೆ.
ಕಚೇರಿ ಒಳಗೆ ಜನಸಾಮಾನ್ಯರೊಂದಿಗೆ ಮಧ್ಯವರ್ತಿಗಳ ತಪಾಸಣೆ ಮಾಡುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಜನಸಾಮಾನ್ಯರ ಕೆಲಸಗಳನ್ನು ತಡ ಮಾಡಲು ಕಾರಣ ಏನು ಎನ್ನುವುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.