ಬಜೆಟ್‌ ಮಂಡನೆಗೂ ಮುನ್ನ ಜನತೆಯ ಆಶೀರ್ವಾದ ಪಡೆದ ಸಿಎಂ

ಬೆಂಗಳೂರು: ಇಂದು ದಾಖಲೆಯ ಹದಿನಾಲ್ಕನೇ ಬಾರಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಅನ್ನು ಮಂಡನೆ ಮಾಡಲಿದ್ದರೆ. ಇದಕ್ಕೂ ಮುನ್ನ ಅವರು ಪಾರ್ಟಿಯ ಶಾಸಕಾಂಗ ಸಭೆಯನ್ನು ನಡೆಸಿದರು.
ಇದೇ ವೇಳೆ ಅವರು ಟ್ವಿಟ್‌ ಮಾಡಿದ್ದಾರೆ. ಹಾಗಾದ್ರೇ ಅವರು ಮಾಡಿರುವ ಟ್ವಿನ್‌ಲ್ಲಿ ಏನು ಇದೇ ಎನ್ನುವುದನ್ನು ನೋಡುವುದಾದ್ರೆ.

ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ,
ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ.

ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ.

ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ.

Verified by MonsterInsights