ಕೊಬ್ಬರಿ ಖರೀದಿ ಕೇಂದ್ರದಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ವಾಗ್ವಾದ

ಡೆಸ್ಕ್
1 Min Read

ತುಮಕೂರು: ನಫೆಡ್ ನಿಂದ ಬೆಂಬಲ ಬೆಲೆಯಡಿ ಉಂಡೆ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ನಗರದ ಎಪಿಎಂಸಿ ಆವರಣದಲ್ಲಿ ನಫೆಡ್ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗಮಿಸಿದ್ದರು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಪಕ್ಷದ ಭಾವುಟವನ್ನು ಪ್ರದರ್ಶಿಸಿದ್ದರಿಂದ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರಾದ ಅಶ್ವತ್ಥ ನಾರಾಯಣ ಹಾಗೂ ಮಾರುತಿ ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಭಾವುಟ ಪ್ರದರ್ಶಿಸದಂತೆ ಬಿಜೆಪಿ ಕಾರ್ಯಕರ್ತರಿಗೆ ತಾಕೀತು ಮಾಡಿದರು.

ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದ ನಡೆಸಿದರು, ಡಿವೈಎಸ್ಪಿ ಚಂದ್ರಶೇಖರ್ ಮಧ್ಯಪ್ರವೇಶಿಸಿ ಕಾರ್ಯಕರ್ತರ ಗದ್ದಲವನ್ನು ತಣ್ಣಾಗಿಸುವ ಪ್ರಯತ್ನ ಮಾಡಿದರು.

Share this Article
Verified by MonsterInsights