ಪರಂ ಆರ್ಶೀವಾದ ಪಡೆದ ಬಿ.ವೈ.ವಿಜಯೇಂದ್ರ

ಡೆಸ್ಕ್
1 Min Read

ಕೊರಟಗೆರೆಯಲ್ಲಿ ಹೊಸ ರಾಜಕಾರಣ??

ತುಮಕೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರಾಧಿಕಾರಿಯಾಗಿರುವ ಬಿ.ವೈ.ವಿಜಯೇಂದ್ರ ಚುನಾವಣೆ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ, ಆರ್ಶೀವಾದ ಪಡೆದಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುಂಚೆ ಮನೆ ದೇವರಾದ ಯಡಿಯೂರು ಸಿದ್ಧಲಿಂಗೇಶ್ವರನ ಪೂಜೆಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರು ದೇಗುಲದಲ್ಲಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.

ಮೊದಲ ಬಾರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಆಕಸ್ಮಿಕವಾಗಿ ಭೇಟಿ ಮಾಡಿ ಆರ್ಶೀವಾದ ಪಡೆದಿದ್ದಾರೆ.

ಬಿ.ವೈ.ವಿಜಯೇಂದ್ರ, ಡಾ.ಜಿ.ಪರಮೇಶ್ವರ್ ಭೇಟಿ ಕೊರಟಗೆರೆ ರಾಜಕಾರಣದಲ್ಲಿ ಹೊಸ ಮಗಲಿಗೆ ಮರಳಿದ್ದು, ಲಿಂಗಾಯತ ಸಮುದಾಯದ ಸಭೆ ನಡೆಸಿದ ಬೆನ್ನಲ್ಲೇ ಬಿ.ವೈ.ವಿಜಯೇಂದ್ರ ಭೇಟಿ ಮಾಡಿರುವುದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Share this Article
Verified by MonsterInsights