ತುಮಕೂರು : ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತಯಾರಿಸಿದ್ದ ಕ್ಯೂಸಿ ಜಾಕಿಂಗ್ ಆನ್ ಆಂಟೋಮಿಟಿಕ್ ಫಿಶಿಂಗ್ ಟೂಲ್ ಪ್ರಾಜೆಕ್ಟ್ ಗೆ ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಪರಿಷತ್-2023 ಉತ್ತಮ ಪ್ರಾಜೆಕ್ಟ್ ಪ್ರಶಸ್ತಿ ಲಭಿಸಿದೆ.
ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ ವತಿಯಿಂದ ರಾಜ್ಯಮಟ್ಟದ 46ನೇ ವಿಜ್ಞಾನ ಹಾಗೂ ತಂತ್ರಜ್ಞಾನ ಪ್ರದರ್ಶನ ಏರ್ಪಡಿಸಲಾಗಿತ್ತು. 1,500 ಪ್ರಾಜೆಕ್ಟ್ ಗಳಲ್ಲಿ 448 ಪ್ರಾಜೆಕ್ಟ್ ಗಳು ಮೊದಲ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದವು. ಇವುಗಳಲ್ಲಿ ಅಂತಿಮವಾಗಿ 48 ಉತ್ತಮ ಪ್ರಾಜೆಕ್ಟ್ ಪ್ರಶಸ್ತಿ ಪಡೆದುಕೊಂಡಿವೆ.
ಕಾಲೇಜಿನ ವಿದ್ಯಾರ್ಥಿಗಳ ಕಾರ್ಯಕ್ರಮವು ಶ್ಲಾಘಿಸಿರುವ ಪ್ರಾಂಶುಪಾಲರಾದ ಡಾಕ್ಟರ್ ಎಂ ಎಸ್ ರವಿಪ್ರಕಾಶ್ ರವರು ವಿಜ್ಞಾನ ಹಾಗೂ ಪರಿಷತ್ನ ಪ್ರದರ್ಶನ ತಮ್ಮ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆ ಒದಗಿಸಿದ್ದು, ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲನ್ನು ಮತ್ತಷ್ಟು ಪರಿಣಾಮಕಾರಿ ಬಳಸಿಕೊಳ್ಳಬೇಕು ಪ್ರದರ್ಶನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನಮ್ಮ ಸಂಸ್ಥೆ ಎಲ್ಲಾ ರೀತಿಯ ಬೆಂಬಲ ಸಹಕಾರ ನೀಡಲಾಗುವುದು ಎಂದರು. ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.
ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಉತ್ತಮ ಪ್ರಾಜೆಕ್ಟ್ ಪ್ರಶಸ್ತಿ ದೊರಕಿದೆ ಕಂಪ್ಯೂಟರ್ ವಿಜ್ಞಾನ ವಿಭಾಗದಿಂದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು. ಬಸವರಾಜ್ ಸಿ. ಎಸ್ ರವರು ಕರ್ನಾಟಕ ರಾಜ್ಯ ಸರ್ಕಾರದಿಂದ ಪ್ರಾಯೋಜಕರ ಪಡೆದಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಆಳ್ವಾಸ್ ಕಾಲೇಜಿನಲ್ಲಿ ಪ್ರಾಜೆಕ್ಟ್ ಪ್ರದರ್ಶನಸಿದ್ದರು. ಈ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ವಿಜ್ಞಾನ ವಿಭಾಗ ಮುಖ್ಯಸ್ಥರು ಹಾಗೂ ಡೀನ್ ರೇಣುಕಾ ಲತಾ, ಎಸ್ಎಸ್ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಮ್ ಎಸ್.ರವಿಪ್ರಕಾಶ್, ಮುಖ್ಯಸ್ಥರಾದ ಡಾ.ಗುರುಪ್ರಕಾಶ್.ಸಿ.ಡಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.