ಪಾವಗಡ : ಗ್ರಾಮ ಪಂಚಾಯಿತಿಗಳಲ್ಲಿ ನಡೆದ ಕಾಮಗಾರಿಗಳ ಕಾರ್ಯ ಹಾಗೂ ಬಿಲ್ ತುಂಬುವ ಸಲುವಾಗಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಸೃಷ್ಟಿಸಲಾಗಿದ್ದು, ವೆಂಕಟಾಪುರ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ವೀರನಾರಾಯಣ ಅವರನ್ನು ಕರ್ತವ್ಯದ ಲೋಪ ನಿಮಿತ್ತ ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಡಾಟಾ ಎಂಟ್ರಿ ಆಪರೇಟರ್ ವೀರನಾರಾಯಣ ಸಮರ್ಪಕವಾಗಿ ಕಾರ್ಯ ನಿರ್ವಹಿಸದೆ, ಸಾರ್ವಜನಿಕರ ಕೆಲಸ ಮಾಡಿಕೊಡುವಲ್ಲಿ ಪಕ್ಷಪಾತ ಮಾಡಿ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ.
ನರೇಗಾ ಗೆ ಸಂಬಂಧಿಸಿದಂತೆ ಫಲಾನುಭವಿಗಳ ಮೆಟೀರಿಯಲ್ ಬಿಲ್ ಗಳನ್ನು ತಂತ್ರಾಂಶದಲ್ಲಿ ನಮೂದಿಸುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆ ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ಅಮಾನತ್ತು ಮಾಡಲಾಗಿದೆ.