ನವದೆಹಲಿ: ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ.ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು ಶ್ರೀಲಂಕಾದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸೋಮವಾರ ಸಂಜೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು. ಅವರನ್ನು ನಾರಾಯಣ ಹೃದಯಾಲಯ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎನ್ನಲಾಗಿದ್ದು. ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಅವರು ವಿಜ್ಞಾನಿಯ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎನ್ನಲಾಗಿದೆ.
ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪುರಸ್ಕಾರಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.