ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣನನ್ನು ಕಾಪಾಡಲು ಹೋದ ತಮ್ಮನ್ನು ಸಾವನ್ನಪ್ಪಿರುವ ದಾರುಣ ಘಟನೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿರಾ ತಾಲೂಕಿನ ದ್ವಾರನ ಕುಂಟೆ ಗ್ರಾಮದ ಸತೀಶ್ (32 ) ಪ್ರಸನ್ನ (29) ಎಂದು ಗುರುತಿಸಲಾಗಿದೆ. ಮೇಕೆಗೆ ಸೊಪ್ಪು ತರಲು ಹೋದ ಸತೀಶ್ ಮರದಿಂದ ಆಯಾ ತಪ್ಪಿ ಬಾವಿಗೆ ಬಿದ್ದಿದ್ದಾನೆ.
ಬಾವಿಗೆ ಬಿದ್ದ ಅಣ್ಣನನ್ನು ಕಾಪಾಡಲು ಹೋದ ತಮ್ಮ ಪ್ರಸನ್ನ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ಪಿಎಸ್ಐ ಭೂವಿತ ಮೃತ ದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ನಡೆಸಿದರು.
ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ