ತುಮಕೂರು: ಟಿಕೆಟ್ ಹಂಚಿಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತೀಕ್ ಅಹಮದ್ ಅವರ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಮಾತುಕತೆ ನಡೆಸಿದರು.
ಕಾಂಗ್ರೆಸ್ ಮುಖಂಡರ ನಡವಳಿಕೆಯಿಂದ ಬೇಸರಗೊಂಡು ಜೆಡಿಎಸ್ ನತ್ತ ಮುಖ ಮಾಡಿದ್ದ ಅತೀಕ್ ಅಹಮದ್, ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಪಕ್ಷ ಸೇರ್ಪಡೆಗೆ ಮುಂದಾಗಿದ್ದರು.
ಮಾಜಿ ಶಾಸಕ ಶಫೀ ಅಹಮದ್ ಸಹ ಇಂದು ಜೆಡಿಎಸ್ ಸೇರ್ಪಡೆಯಾಗಲು ಮುಂದಾದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅತೀಕ್ ಅಹಮದ್ ಮನೆಗೆ ಭೇಟಿ ನೀಡಿ ಮನವೊಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ಅವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ಮಾತುಕತೆ ನಡೆಸಿರುವುದು ಒಡೆದ ಮನೆಯಾಗಿದ್ದ ನಗರ ಕಾಂಗ್ರೆಸ್ ಅನ್ನು ಜೋಡಿಸಿದ್ದಾರೆ.
ಈ ವೇಳೆ ಸುಲ್ತಾನ್ ಅಹಮದ್, ಸಿದ್ಧಲಿಂಗಯ್ಯ, ಡಿ.ಟಿ.ವೆಂಕಟೇಶ್, ಮುರುಳೀಧರ ಹಾಲಪ್ಪ ಸೇರಿದಂತೆ ಇತರರು ಮಾತುಕತೆಯಲ್ಲಿ ಪಾಲ್ಗೊಂಡಿದ್ದರು.