ತುಮಕೂರು: ನಮ್ಮ ಕಣ್ಣಿಗೆ ಕಾಣಿಸುತ್ತಿರುವ ಬರ, ಕೇಂದ್ರ ಬರ ಅಧ್ಯಯನ ತಂಡಕ್ಕೆ ಕಾಣಿಸುತ್ತಿಲ್ಲ, ಹಸಿರಿದೆ ಎಂದು ಬರೆದುಕೊಂಡು ಹೋಗಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಶೇ. 69 ರಷ್ಟು ಮಳೆ ಕೊರತೆಯಾಗಿರುವುದರಿಂದ ಬೆಳೆಯಾಗಿಲ್ಲ. ಆದರೆ ಬರ ಅಧ್ಯಯನಕ್ಕೆ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ತಂಡದ ಕಣ್ಣಿಗೆ ಬರ ಕಾಣಿಸಿಲ್ಲ ಎಂದರು.
ಕೇಂದ್ರ ಸರ್ಕಾರಕ್ಕೆ 17 ಸಾವಿರ ಕೋಟಿ ರೂ. ಬರ ಪರಿಹಾರ ಹಣ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಒಂದು ರೂಪಾಯಿ ಪರಿಹಾರವನ್ನು ನೀಡಿಲ್ಲ ಎಂದು ದೂರಿದರು.
ಬರ ಪರಿಸ್ಥಿತಿ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ 500 ಕೋಟಿ ರೂ. ಹಣ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಆ ಹಣವನ್ನು ವಿನಿಯೋಗಿಸಲಿದ್ದಾರೆ ಎಂದು ಅವರು ಹೇಳಿದರು.