ತುಮಕೂರು: ಕ್ಯಾಂಟರ್ ಲಾರಿ, ಇಂಡಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೇ ಗ್ರಾಮದ ನಾಲ್ವರು ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ.
ತುಮಕೂರಿನಿಂದ ಕೆಬಿಕ್ರಾಸ್ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಲಾರಿ, ತುಮಕೂರು ಕಡೆಗೆ ಬರುತ್ತಿದ್ದ ಇಂಡಿಕಾ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರೆಲ್ಲರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ನಡುವನಹಳ್ಳಿ ಗ್ರಾಮದವ ರಾಮಣ್ಣ (58), ನಾರಾಯಣಪ್ಪ (54) ಸಾಗರ್(23) ಮತ್ತು ನಾರಾಯಣಪ್ಪ ಅವರ ಪತ್ನಿ ನಾಗರತ್ನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.