ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಅನ್ನು ಮಂಡನೆಯನ್ನು ಶುಕ್ರವಾರ ಮಾಡಿದ್ದಾರೆ. ಈ ನಡುವೆ ಅವರು ಆರೋಗ್ಯ ಕ್ಷೇತ್ರಕ್ಕೂ ಹಲವು ಯೋಜನೆಗಳ ಬಗ್ಗೆ ತಿಳಿಸಿದ್ದಾರೆ.
ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 “ನಮ್ಮ ಕ್ಲಿನಿಕ್’ಗಳ ಸ್ಥಾಪನೆ.
ರಾಜ್ಯದಲ್ಲಿ ಮಹಿಳಾ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ. ಮಾಡಲಾಗುವುದು ಅಂತ ತಿಳಿಸಿದ್ದು, ಇದೇ ವೇಳೇ ಅವರು ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ.
ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ. ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ Infusion Centre ಗಳನ್ನು ಸ್ಥಾಪಿಸಲಾಗುವುದು. ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ; 2022-23ರಲ್ಲಿ 10 ಕೋಟಿ ರೂ. ಅನುದಾನ.
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 75 ತಾಲ್ಲೂಕು ಆಸ್ಪತ್ರೆಗಳ ಮ್ಯಾಪಿಂಗ್, ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ನೀಡಲಾಗುವುದು ಅಂತ ತಿಳಿಸಿದ್ದಾರೆ.
ಸರ್ಕಾರಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹೆಚ್ಚು ಹಾಸಿಗೆಗಳ ಸಾಮರ್ಥ್ಯವಿರುವ ಆಸ್ಪತ್ರೆಗಳನ್ನು ಎನ್.ಎಂ.ಸಿ.ಯ ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ; ಈ ವರ್ಷ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭ.
“ಮುಖ್ಯಮಂತ್ರಿ ಆರೋಗ್ಯ ವಾಹಿನಿ” ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭ.
ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ. ಬಡವರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ಒದಗಿಸಲು ಕೈಗೊಳ್ಳುವ ಕ್ರಮಗಳು:
ಅ. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ. ಆ. ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು.
ಇ. ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗಿಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ
ಅಪೌಷ್ಟಿಕತೆ ನಿವಾರಣೆಗೆ ಒತ್ತ ನೀಡಲಾಗುವುದು ಅಂತ ತಿಳಿಸಿದ್ದಾರೆ.