ಭೀಕರ ಅಪಘಾತ: ತುಮಕೂರಿನ ನಾಲ್ವರು ಸಾವು

ಡೆಸ್ಕ್
1 Min Read

ತುಮಕೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊರವಲಯದಲ್ಲಿ ನಡೆದಿದೆ.

ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ತುಮಕೂರು ನಗರದ ಶಂಶುದ್ದೀನ್ (40), ಮಲ್ಲಿಕಾ (37) ಕಲೀಲ್ (42), ತಬೀಜ್ (13) ಎಂದು ಗುರುತಿಸಲಾಗಿದೆ.
ನರ್ಗೀಸ್, ರೆಹಾನ್ ಹಾಗೂ ರೆಹಮಾನ್ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ತುಮಕೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

‘ತುಮಕೂರು ಕಡೆಗೆ ಹೊರಟಿದ್ದ ಕಾರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಏಳು ಜನರ ಪೈಕಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.

Share this Article
Verified by MonsterInsights