ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿಗೆ ಶಾಕ್ ನೀಡಿರುವ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗಂಗೋನಳ್ಳಿ ಪಂಚಾಯಿತಿ ಕೋಡಿ ಮುದ್ದೇನಹಳ್ಳಿ ಗ್ರಾಮದ ಹಲವಾರು ಕಾರ್ಯಕರ್ತರು ಜೆಡಿಎಸ್ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು
ಈ ಕಾರ್ಯಕರ್ತರಿಗೆ ಮಾನ್ಯ ಕೆಪಿಸಿಸಿ ಕಾರ್ಮಿಕ ವಿಭಾಗದ ಮಾನ್ಯ ರಾಜ್ಯಾಧ್ಯಕ್ಷರಾದ ಕೆ ಪುಟ್ಟಸ್ವಾಮಿಗೌಡರ ಆದೇಶದ ಮೇರೆಗೆ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನ್ಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಚಂದ್ರಶೇಖರ್ ಗೌಡರವರ ಅನುಮತಿ ಮೇರೆಗೆ ಹಾಗೂ ಕಾರ್ಮಿಕ ವಿಭಾಗದ ಮಾನ್ಯ ಜಿಲ್ಲಾಧ್ಯಕ್ಷರಾದ ಶ್ರೀಯುತ ಅಬ್ದುಲ್ ರಹಿಂ ಜಿ ರವರ ಸಲಹೆ ಮೇರೆಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದಲ್ಲಿ ಜಿಲ್ಲಾ ಹಾಗೂ ಬ್ಲಾಕ್ ಪದಾಧಿಕಾರಿಗಳನ್ನಾಗಿ ನೇಮಿಸಲಾಯಿತು
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಮಾನ್ಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ವಿ ಎಸ್ ಸೈಯದ್ ದಾದಾಪೀರ್ ಹಾಗೂ ಕೆ ಜಿ ವೆಂಕಟೇಶ್ ರವರು ತುಮಕೂರು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಮಾನ್ಯ ಅಧ್ಯಕ್ಷರಾದ ಶ್ರೀಯುತ ರಮೇಶ್ ರವರು ಹಾಗೂ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಆದಿಲ್ ಭಾಷಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಭಾಗ್ಯ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು