ತುಮಕೂರು: ತುಮಕೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್ ನೀಡಿದ್ದು, ಇಡೀ ಕಚೇರಿಯನ್ನು ಹಿಡಿತಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಎಂದಿನಂತೆ ಕಚೇರಿ ಸಮಯಕ್ಕೆ ಬಂದ ಸಿಬ್ಬಂದಿಗಳಿಗೆ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿಗಳು ದರ್ಶನ ನೀಡಿದ್ದು, ಹೊಸ ಆಡಳಿತ ಕಚೇರಿಯನ್ನು ಬ್ಲಾಕ್ ಮಾಡಿ ತನಿಖೆ ನಡೆಸಲಾಗುತ್ತಿದೆ.
ಒಬ್ಬ ಸಿಬ್ಬಂದಿಯ ಬದಲಾಗಿ ಇಡೀ ಪಾಲಿಕೆ ಕಚೇರಿಯ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು, ತನಿಖೆ ಮುಂದುವರೆದಿದೆ.