ಭೂ ಪರಿವರ್ತನೆಗೆ ಲಂಚ: ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್

ಚಿನಾಹಳ್ಳಿ: ಭೂ ಪರಿವರ್ತನೆ ಮಾಡಲು ಲಂಚ ಪಡೆದು ಲೋಕಾಯುಕ್ತ ಅಧಿಕಾರಿಗಳಿಗೆ ತಹಶೀಲ್ದಾರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಸಂಜೆ ನಡೆದಿದೆ.

ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಗೀತಾ ಅವರುವಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಾಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಗೆ ಸೇರಿದ‌ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ಲಂಚಕ್ಕೆ ತಹಶಿಲ್ದಾರ್ ಗೀತಾ ಬೇಡಿಕೆಯಿಟ್ಟಿದ್ದರು.

ಬುಧವಾರ ಬೆಳಿಗ್ಗೆ ಮಲ್ಲಿಕಾರ್ಜುನ್ ಅವರಿಂದ 20 ಸಾವಿರ ಹಣ ಪಡೆದಿದ್ದ ತಹಶಿಲ್ದಾರ್ ಗೀತಾ. ಸಂಜೆ 30 ಸಾವಿರ ಹಣ ಸ್ವೀಕರಿಸುವಾಗ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಂಜೆ ರೈತ ಮಲ್ಲಿಕಾರ್ಜುನ್ ಅವರನ್ನು ತಹಶಿಲ್ದಾರ್ ಗೀತಾ ಮನೆಗೆ ಕರೆಸಿಕೊಂಡು ಲಂಚ ಸ್ವೀಕರಿಸುವ ವೇಳೆ ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಸದ್ಯ ಚಿಕ್ಕನಾಯಕನಹಳ್ಳಿ ತಹಶಿಲ್ದಾರ್ ಗೀತಾ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು. ತಹಸೀಲ್ದಾರ್ ವಸತಿ ಗೃಹದಲ್ಲಿ ತನಿಖೆ ಮುಂದುವರೆಸಿದ್ದಾರೆ.

ವರದಿ: ಚಂದ್ರಶೇಖರ್

 

Verified by MonsterInsights