ಪಾವಗಡ: ಹೆಂಡತಿಯೊಂದಿಗೆ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದ ಆರೋಪಿಸಿ ವ್ಯಕ್ತಿಯೊಬ್ಬನನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಮುರಾರಾಯನಹಳ್ಳಿಯಲ್ಲಿ ನಡೆದಿದೆ.
ಮುರಾರಾಯನಹಳ್ಳಿಯ ಮಾಳಪ್ಪ(58) ಮೃತ ವ್ಯಕ್ತಿಯಾಗಿದ್ದು, ಈ ಹಿಂದೆ ತನ್ನ ಹೆಂಡತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ 14 ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಹೊರ ಬಂದಿದ್ದನೆಂದು ತಿಳಿದು ಬಂದಿದೆ.
ಮೃತ ಮಾಳಪ್ಪ ಆರೋಪಿಯಾದ ಬುಡ್ಡಪ್ಪನವರ ಜಮೀನಿಗೆ ಕೂಲಿ ಕೆಲಸಕ್ಕೆ ಹೋಗಿದ್ದಾಗಪತ್ನಿಯ ಜೊತೆ ಕೆಟ್ಟದಾಗಿ ನಡೆದುಕೊಳ್ಳುತ್ತೀಯ ಎಂದು ಗಲಾಟೆ ಮಾಡಿ ಮನೆಗೆ ಕಳುಹಿಸಿದ್ದರು. ನಂತರ ಮೃತರ ಮನೆ ಬಳಿ ಬಂದು ಆರೋಪಿ ಬುಡ್ಡಪ್ಪ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ. ದೇಹದ ಕುತ್ತಿಗೆ, ಹೊಟ್ಟೆ, ಬೆನ್ನಿನ ಮೇಲೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ತನ್ನ ಪತ್ನಿಯೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಅನುಮಾನಿಸಿ ತಂದೆಯನ್ನು ಹತ್ಯೆ ಮಾಡಲಾಗಿದೆ ಎಂದು ಮೃತರ ಪುತ್ರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ
ಪಟ್ಟಣ ಠಾಣೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.