ತುಮಕೂರು: ರಾಜ್ಯದ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಸರ್ಕಾರ ಮಾರ್ಗಸೂಚಿ, ಆದೇಶ ಹೊರಡಿಸಿದ್ದು ಅಧಿಕಾರಿಗಳು ನಿರ್ಲಕ್ಷ್ಯವಹಿಸದೇ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರದ ಯೋಜನೆ ಅನುಷ್ಠಾನಗೊಳಿಸದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಅವರು, ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ ನೀಡಬೇಕೆಂದು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಸಚಿವದ್ವಯರು ಕೃಷಿ ಇಲಾಖೆಯ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸುತ್ತಿದ್ದರೆ ಅಧಿಕಾರಿಗಳ ಗ್ಯಾಲರಿಯಲ್ಲಿದ್ದ ಅಧಿಕಾರಿಯೊಬ್ಬರು ನಿದ್ರೆಗೆ ಜಾರಿದ್ದರು,