ರಾಜ್ಯ ಸಚಿವ ಸಂಪುಟದ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಖಾತೆ ಹಂಚಿಕೆಯನ್ನು ಮಾಡಿದ್ದು, ತುಮಕೂರು ಜಿಲ್ಲೆಯ ಡಾ.ಜಿ.ಪರಮೇಶ್ವರ್ ಅವರು ಎರಡನೇ ಬಾರಿ ಗೃಹ ಸಚಿವರಾದರೆ, ಮೊದಲ ಬಾರಿಗೆ ಸಚಿವರಾಗಿರುವ ಕೆ.ಎನ್.ರಾಜಣ್ಣ ಅವರು ಸಹಕಾರ ಖಾತೆಯನ್ನು ನಿರ್ವಹಿಸಲಿದ್ದಾರೆ.