ನಿವೃತ್ತ ಅಧಿಕಾರಿ ಬಲರಾಮ್ ಗೆ ರಾಜ್ಯೋತ್ಸವ ಪ್ರಶಸ್ತಿ

ತುಮಕೂರು: ಪಾವಗಡದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸಲು ಪ್ರಮುಖ ಕಾರಣಕರ್ತರಾಗಿದ್ದ ನಿವೃತ್ತ ಕೆಪಿಟಿಸಿಎಲ್ ಅಧಿಕಾರಿ ಜಿ.ವಿ.ಬಲರಾಮ್ ಗೆ ಸರ್ಕಾರ 68ನೇ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

2013ರಲ್ಲಿ ಏಷ್ಯಾದಲ್ಲಿಯೇ ಅತಿದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದಾಗ, ಸೋಲಾರ್ ಎನರ್ಜಿ ಕಾರ್ಫೋರೇಷನ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪಾವಗಡ ಮೂಲದ ಜಿ.ವಿ.ಬಲರಾಮ್ ಅವರು ಪಾವಗಡಕ್ಕೆ ಸೋಲಾರ್ ಪ್ಲಾಂಟ್ ಸ್ಥಾಪಿಸಲು ಪ್ರಸ್ತಾವನೆಯನ್ನು ಮುಂದಿಟ್ಟು, ಯೋಜನೆಯನ್ನು ಯಶಸ್ವಿಗೊಳಿಸಿದ್ದರು.

ಸೋಲಾರ್ ಪಾರ್ಕ್ ಲೋಕಾರ್ಪಣೆಗೊಂಡ ನಂತರ ನಡೆದ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನಪ್ಪಿದ್ದರು.

ಡಿಕೆಶಿ ಪರಮಾಪ್ತ: 2013ರಲ್ಲಿ ಇಂಧನ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸೋಲಾರ್ ಪಾರ್ಕ್ ಸ್ಥಾಪನೆಗೆ ದುಡಿದ್ದ ಜಿ.ವಿ.ಬಲರಾಮ್, ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು, 2018ರ ಚುನಾವಣೆಯಲ್ಲಿ ಪಾವಗಡದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು ಕಡೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿಯಿಂದ ಟಿಕೆಟ್ ಪಡೆದು ಕಣಕ್ಕೆ ಇಳಿದಿದ್ದರು.

 

Verified by MonsterInsights