ಸಿರಾ: ತಾಲ್ಲೂಕಿನ ಪ್ರಸಿದ್ಧ ತಾವರೆಕೆರೆ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ನಂತರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾವರೆಕೆರೆ ಗ್ರಾಮದ ಕೃಷ್ಣೇಗೌಡ ಅವರು ಪ್ರಸಿದ್ಧ ಬಂಡಿ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ರಥೋತ್ಸವ ಮುಗಿದ ಕೆಲವೇ ನಿಮಿಷಗಳಲ್ಲಿ ಹೃದಯಾಘಾತದಿಂದ ಹಠಾತ್ ನಿಧನ ಹೊಂದಿದ್ದಾರೆ.
ಬಂಡಿ ರಂಗನಾಥಸ್ವಾಮಿ ಜಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಕೃಷ್ಣೇಗೌಡರೊಂದಿಗೆ ತೆಗೆಸಿಕೊಂಡಿರುವ ಭಾವಚಿತ್ರಗಳನ್ನು ಹಂಚಿಕೊಂಡಿದ್ದು, ತಕ್ಷಣ ಭೇಟಿ ನೀಡಿ ಅವರ ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.