ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಪ್ರಮಾಣವಚನ

ಡೆಸ್ಕ್
1 Min Read

2ನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕಂಠೀರವ ಕ್ರೀಡಾಂಗಣದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಲು  ಮುಂದಾಗಿದ್ದಾರೆ.

2013ರಲ್ಲಿ ಬಹುಮತದ ಮೇಲೆ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಸರ್ಕಾರದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಅನ್ನಭಾಗ್ಯ ಯೋಜನೆಯನ್ನು ಘೋಷಣೆ ಮಾಡಿದ್ದರು.

2023ರಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿರುವ ಸಿದ್ದರಾಮಯ್ಯ ಅವರು ಅಪಾರ ಅಭಿಮಾನಿಗಳ ಸಮ್ಮುಖದಲ್ಲಿಯೇ  ಪ್ರಮಾಣ ವಚನ ಸ್ವೀಕರಿಸಲು ತಯಾರಿ ನಡೆಸಿದ್ದು ಗುರುವಾರ ಸಂಜೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.

ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ಕಂಠೀರಣ ಕ್ರೀಡಾಂಗಣಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಬಂದೋಬಸ್ತ್ ಬಗ್ಗೆಯೂ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.

Share this Article
Verified by MonsterInsights