ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ನೇಮಕ

ಡೆಸ್ಕ್
1 Min Read

ತುಮಕೂರು: ತ್ರಿವಿಧ ದಾಸೋಹಿಗಳ ನೆಲೆಬೀಡು ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ಧಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಿಸಲಾಗಿದೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಮೈಲನಹಳ್ಳಿಯ ಷಡಕ್ಷರಯ್ಯ ಎಂ.ಬಿ ಮತ್ತು ವಿರುಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಕುಮಾರ್ ಅವರು ಬಿಎ,ಬಿಎಡ್, ಎಂಎಸ್ಸಿ, ಎಂ.ಎ ಹಾಗೂ ವಿದ್ವತ್ ಪೂರ್ಣಗೊಳಿಸಿ ಸಿದ್ಧಗಂಗಾ ಮಠದ ಸಿದ್ಧಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಬಸವ ಜಯಂತಿಯಂದು ಶ್ರೀ ಮಠದಲ್ಲಿ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮನೋಜ್ ಕುಮಾರ್ ಅವರು ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ದೀಕ್ಷೆ ಪಡೆಯಲಿದ್ದಾರೆ.
ಇವರೊಂದಿಗೆ ರಾಮನಗರ ಜಿಲ್ಲೆಯ ಕಂಚುಗಲ್ ಬಂಡೆ ಮಠದ ಉತ್ತರಾಧಿಕಾರಿಯಾಗಿ ಹರ್ಷ ಕೆ.ಎಂ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಬಸವಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಗೌರೀಶ್ ಕುಮಾರ್ ದೀಕ್ಷೆ ಪಡೆಯಲಿದ್ದಾರೆ ಎಂದು ಮಠದ ಕಾರ್ಯದರ್ಶಿ ತಿಳಿಸಿದ್ದಾರೆ.

Share this Article
Verified by MonsterInsights