ತಪ್ಪಾಯ್ತು ಬಿಟ್ಬಿಡಿ ಅಣ್ಣ ಎಂದ ಪೊಲೀಸರು..!

ಲಾರಿಗಳನ್ನು ತಡೆದು ಲಂಚಕ್ಕಾಗಿ ಪೊಲೀಸ್ ಸಿಬ್ಬಂದಿ ಬೇಡಿಕೆ ಇಡುವ ದೃಶ್ಯಗಳನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಪೊಲೀಸರು ಲಂಚ ಸ್ವೀಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಚಿದಾನಂದಸ್ವಾಮಿ, ಜೀಪ್ ಚಾಲಕ ಚಿಕ್ಕಹನುಮಯ್ಯ ಎನ್ನುವವರೇ ಹಣ ವಸೂಲಿ ಮಾಡುವಾಗ ಸಿಕ್ಕಿ ಬಿದ್ದಿರುವ ಪೊಲೀಸ್ ಅಧಿಕಾರಿಗಳಾಗಿದ್ದಾರೆ.

ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಬೆನ್ನು ಬಿದ್ದ ನಂತರ ಪೊಲೀಸರು, ನಂತರ ತಾವು ಪಡೆದಿದ್ದ ಹಣವನ್ನು ಲಾರಿ ಚಾಲಕನಿಗೆ ವಾಪಸ್ ಕೊಟ್ಟಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು, ನಮ್ಮಿಂದ ತಪ್ಪಾಗಿದೆ ಬಿಟ್ಟುಬಿಡಿ ಅಣ್ಣಾ ಎಂದು ಕ್ಷಮೆ ಕೇಳಿದ್ದಾರೆ.

ಎಪಿಎಂಸಿ ಮಾರುಕಟ್ಟೆಗಳನ್ನು ಕುರಿ, ಮೇಕೆಗಳನ್ನು ಖರೀದಿ ಮಾಡಿ, ಸಾಗಾಣೆ ಮಾಡುತ್ತಿರುವುದಕ್ಕೆ ಅಗತ್ಯವಾಗಿ ದಾಖಲೆಗಳು ಇದ್ದರೂ ಹಣ ಯಾಕೆ ವಸೂಲಿ ಮಾಡಿದ್ದೀರಾ ಎಂದು ಕೆಆರ್ ಎಸ್ ಪಕ್ಷದ ಕಾರ‍್ಯರ‍್ತರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಬ್ಬರು ಪೊಲೀಸರು ಅಮಾನತು ಇನ್ನು ಲಂಚ ಪಡೆದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಎಸ್ಐ ಮತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಎಸ್ಪಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Verified by MonsterInsights