ಬೆಂಗಳೂರು: ರಾಹುಲ್ ಗಾಂಧಿ ಜೊತೆಗೆ ನಾವು ಇದ್ದೀವಿ, ಕೋರ್ಟ್ ಏನೇ ತೀರ್ಪು ಕೊಡಲಿ ನಾವು ಅವರ ಪರ ಇದ್ದು, ಇಂದು ಮಧ್ಯಾಹ್ನ ಮೂರು ಗಂಟೆಗೆ ಸುಮಾರಿಗೆ ವಿಧಾನಸೌಧದ ಮುಂಭಾಗದಲ್ಲಿ ಇರುವ ಗಾಂಧಿಜೀಯವರ ಪ್ರತಿಮೆ ಮುಂದೆ ನಾವೆಲ್ಲ ಪ್ರತಿಭಟನೆ ನಡೆಸುತ್ತೇವೆ ಆಂತ DCM ಡಿ.ಕೆ ಶಿವಕುಮಾರ್ ಅವರು ಹೇಳಿದರು.
ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗಾರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು, ಇದೇ ವೇಳೆ ಅವರು ಮಾತನಾಡಿ, ಇದು ಬಿಜೆಪಿಯ ಕುತಂತ್ರವಾಗಿದ್ದು, ಈನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದೇವೆ ಅಂತ ಹೇಳಿದರು.
ಇನ್ನೂ ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ನ್ಯಾಯಾಲಯವು ಈ ತೀರ್ಪನ್ನು ನೀಡಿದೆ.
ರಾಹುಲ್ ಗಾಂಧಿ ವಿರುದ್ಧ ಕನಿಷ್ಠ 8 ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳು ಬಾಕಿ ಉಳಿದಿವೆ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವು ಯಾವುದೇ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದರಿಂದ ರಾಹುಲ್ ಗಾಂಧಿಗೆ ಭಾರಿ ಹಿನ್ನಡೆಯಾಗಿದೆ.