ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಡೆಸ್ಕ್
1 Min Read
Crime

ತುಮಕೂರು: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ತಾಲ್ಲೂಕಿನ ಪಂಡಿತನಹಳ್ಳಿ ಬಳಿ ನಡೆದಿದೆ.

Crime
Crime

ಮರಳೂರಿನ ಸಿದ್ದಗಂಗಯ್ಯ (62),ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ಬೆಸ್ಕಾಂ ನಿವೃತ್ತ ನೌಕರರಾಗಿದ್ದ ಸಿದ್ದಗಂಗಯ್ಯ  ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರಯ, ನಂತರ ಬೆಂಗಳೂರಿನ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ನಡೆಸುತ್ತಿದ್ದರು ಎನ್ನಲಾಗಿದೆ.

ಇಂದು ಬೆಳಿಗ್ಗೆ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಗುದ್ದಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸದ್ಯ ಮೃತ ದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Article
Verified by MonsterInsights