ಬೆಂಗಳೂರು: ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಶೀಘ್ರ ಹುದ್ದೆಗಳ ಭರ್ತಿ ಮಾಡಲಾಗುವುದು ಅಂಥ ಪಶುಸಂಗೋಪನ ಸಚಿವ ಸಚಿವ ವೆಂಕಟೇಶ್ ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಪ್ರಶ್ನೆಗೆ ಉತ್ತರಿಸಿದ ಅವರು ‘ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಉಳಿದಿರುವ ವೈದ್ಯರ ಹಾಗೂ ವಿವಿಧ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಕ್ರಮವಹಿಸಲಾಗುವುದು ಅಂತ ತಿಳಿಸಿದರು. ಪಶು ಚಿಕಿತ್ಸಾಲಯಗಳಲ್ಲಿ ಹೆಚ್ಚುವರಿಯಾಗಿರುವ ಪಶುವೈದ್ಯರನ್ನು ಅಗತ್ಯವಿರುವ ಕಡೆ ವರ್ಗಾವಣೆ ಮಾಡಲಾಗುವುದು. ಸಿಬ್ಬಂದಿ ನೇಮಕ ಸಂಬಂಧ ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ದೊರೆತ ಕೊಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಅಂತ ಅವರು ಇದೇ ವೇಳೆ ತಿಳಿಸಿದರು.